Kannada NewsPolitics

ಶುಕ್ರವಾರ ಕಡೋಲಿ ಸ್ವರಾಜ್ಯ ಸಂಕಲ್ಪ ಸಮಾವೇಶ : ಆನಂದ ಪಾಟೀಲ

ವೀರಮಾತೆ ಜೀಜಾಬಾಯಿ, ಸ್ವಾಮಿ ವಿವೇಕಾನಂದರ ಜನ್ಮದಿನ ಮತ್ತು ಕಡೋಲಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆ ಸ್ಥಾಪನೆಯಾಗಿ ನಾಲ್ಕು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ ಕಡೋಲಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜ ಮೈದಾನದಲ್ಲಿ ಶುಕ್ರವಾರ ಸಂಜೆ 5 ಗಂಟೆಗೆ ಸ್ವರಾಜ್ಯ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಆನಂದ ಪಾಟೀಲ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸ್ವರಾಜ್ಯ ಸಂಕಲ್ಪ ಸಮಾವೇಶ” ವನ್ನು ಯಮಕನಮರಡಿ ಕ್ಷೇತ್ರದ ಬಹುಜನ ಸಮಾಜ, ಕಡೋಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಹಾಗೂ ಕಡೋಲಿ ಗ್ರಾಮ ಪಂಚಾಯತ್‌ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಖ್ಯಾತ ನಟ, ಪರಿಣಾಮಕಾರಿ ವಾಗ್ಮಿ, ಸಂಸದ ಡಾ. ಅಮೋಲ್ ಕೋಲ್ಹೆ ಅವರು ಭಾಗವಹಿಸಲಿದ್ದು, ರಾಷ್ರ್ಟೀಯ ಧರ್ಮಚಾರ್ಯ ಪ.ಪೂ. ಭಗವಾನಗಿರಿ ಮಹಾರಾಜ ಹಾಗೂ ಕಡೋಲಿ ದುರ್ದುಂಡೇಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರು ಉಪಸ್ಥಿತರಿರುವರು ಎಂದು ತಿಳಿಸಿದರು

Belgaum Express News Desk

Leave a Reply

error: Content is protected !!
%d bloggers like this: