ಸೂರ್ಯದೇವನು ಪಥ ಬದಲಾಯಿಸಿದ ಸಂಕ್ರಮಣದ ಶುಭ ದಿನದಂದು ರಾಜ್ಯವನ್ನು ದೇಶದ ಮೊದಲ “ಯೋಗ ಸಾಕ್ಷರತಾ ರಾಜ್ಯ”ವನ್ನಾಗಿಸುವುದರ ಜತೆಗೆ ಯೋಗ ಪ್ರದರ್ಶನದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸುವ ಭಾಗವಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಬೃಹತ್ ಯೋಗಥಾನ್-2023 ಕಾರ್ಯಕ್ರಮ ನಡೆಯಿತು.
ಯೋಗಥಾನ್ ಗೆ ಚಾಲನೆ ನೀಡಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಯೋಗದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಲು ರಾಜ್ಯದಾದ್ಯಂತ ಯೋಗಥಾನ್ ಹಮ್ಮಿಕೊಳ್ಳಲಾಗಿದೆ ಎಂದರು.
ಯೋಗಸಾಧನೆಯಲ್ಲಿ ಗಿನ್ನಿಸ್ ದಾಖಲೆ ಮಾಡಲು ರಾಜ್ಯದಲ್ಲಿ ಏಕಕಾಲದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುತ್ತಿದ್ದಾರೆ.
ಯೋಗದಿಂದ ಆರೋಗ್ಯಕರ ಮತ್ತು ಸಂತೋಷಕರ ಬದುಕು ಸಾಧ್ಯವಾಗಲಿದೆ ಎಂದರು.
ಇಂದಿನ ಯೋಗಥಾನ್ ಮೂಲಕ ಕರ್ನಾಟಕ ರಾಜ್ಯವನ್ನು ದೇಶದ ಮೊದಲ “ಯೋಗ ಸಾಕ್ಷರತಾ ರಾಜ್ಯ” ವನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು