ಬೆಳಗಾವಿ : ಖಾನಾಪೂರ ತಹಶೀಲ್ದಾರರಾಗಿ ಸೇವೆ ಸಲ್ಲಿಸಿ ಸದ್ಯಕ್ಕೆ ಹಿಡಕಲ್ ಡ್ಯಾಂ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿಭಾಯಿಸುತ್ತಿರುವ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಪೀರಜಾದೆ , ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಆಜಮ್ ನಗರದಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಡಿಟಿಐನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ ಜಾಫರ್ ಫಿರ್ಜಾದೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕಾರ್ಯ ನಿಮಿತ್ತ ರೇಷ್ಮಾ ತಾಳಿಕೋಟಿ ಬೆಂಗಳೂರಿಗೆ ತೆರಳಿದ್ದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತಖಿಕೆ ಮಾಡುತ್ತಿದ್ದಾರೆ.
